ಚಿತ್ರದುರ್ಗ ಜಿ.ಪಂ ಅಧ್ಯಕ್ಷೆ ಸೌಭಾಗ್ಯ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

Share

ಚಿತ್ರದುರ್ಗ- ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಹಾಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ವಿ.ವೈ.ಘೋರ್ಪಡೆ ಇಂದು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.

ಸೌಭಾಗ್ಯ ಬಸವರಾಜನ್ ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ನಂತರ ಸೌಭಾಗ್ಯ ಬಸವರಾಜನ್ ಅವರನ್ನು ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಾಗ ಜಿಲ್ಲಾ ಉಸ್ತುವಾರಿ ಸಚಿವರು,ಲೋಕಸಭಾ ಸದಸ್ಯರು, ಶಾಸಕರ ಹಾಗೂ ಪಕ್ಷದ ಉಸ್ತುವಾರಿಗಳು ಮತ್ತು ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಆದ ಒಪ್ಪಂದದಂತೆ ೧೫ ತಿಂಗಳ ತಮ್ಮ ಅಧಿಕಾರವಾಧಿ ಮುಗಿದ ನಂತರ ಅಧ್ಯಕ್ಷ ಸ್ಥಾನ ತೆರವುಗೊಳಿಸದೆ ಅಧಿಕಾರದಲ್ಲಿ ಮುಂದುವರೆದಿರುವುದು ಮತ್ತು ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಸ್ಥಾನವನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರೂ ಕೂಡ ಸೌಭಾಗ್ಯ ಬಸವರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡದ ಹಿನ್ನಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ನಾಯಕರ ನಿರ್ದೇಶನ ಧಿಕ್ಕರಿಸುವುದಕ್ಕೆ ಹಾಗೂ ಪಕ್ಷದ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿರುವುದಕ್ಕೆ ಸೌಭಾಗ್ಯ ಬಸವರಾಜನ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸೌಭಾಗ್ಯ ಬಸವರಾಜನ್ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯಿತಿ ಸದಸ್ಯರುಗಳು ಸಾಮಾನ್ಯಸಭೆಯಲ್ಲಿ ಧರಣಿ ಮತ್ತು ಪ್ರತಿಭಟನೆ ಮಾಡಿ ರಾಜ್ಯದ ಗಮನ ಸೆಳೆದಿದ್ದರು ಅಲ್ಲದೆ ಇತ್ತೀಚಿಗೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಕೂಡ ಸೌಭಾಗ್ಯ ಬಸವರಾಜನ್ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲಿಯೇ ಇದೀಗ ಕೆಪಿಸಿಸಿ ಈ ನಿರ್ಧಾರ ತೆಗೆದುಕೊಂಡು ಸೌಭಾಗ್ಯ ಬಸವರಾಜನ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

Be the first to comment on "ಚಿತ್ರದುರ್ಗ ಜಿ.ಪಂ ಅಧ್ಯಕ್ಷೆ ಸೌಭಾಗ್ಯ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ"

Leave a comment

Your email address will not be published.


*