ವಾಯು ಸೇನೆ : ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

Share
  • 9
    Shares

ದಾವಣಗೆರೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೧೭-೧೮ ನೇ ಸಾಲಿನಲ್ಲಿ ಭಾರತೀಯ ವಾಯು ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅವಿವಾಹಿತ ಅರ್ಹ ಪುರುಷ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ. ರಾಜ್ಯದ ಹಿಂದುಳಿದ ವರ್ಗಗಳಾದ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಡಿ.೧೫ ರೊಳಗಾಗಿಅರ್ಜಿಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ ನ್ನು (ಸಹಾಯವಾಣಿ- ೦೮೦-೬೫೯೭೦೦೦೪) ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಆಯುಕ್ತರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ವಾಯು ಸೇನೆ : ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ"

Leave a comment

Your email address will not be published.


*