ಸ್ವಚ್ಛತೆ ನಮ್ಮೆಲ್ಲರ ಕರ್ತವ್ಯ : ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ

Share

ಚಿತ್ರದುರ್ಗ-ಮನೆಯ ಸುತ್ತಮುತ್ತಲಿನ ವಾತಾವರಣದ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ಅವರು ನ.೨೮ ರಂದು ಗೋನೂರು ಗ್ರಾ.ಪಂ. ವ್ಯಾಪ್ತಿಯ ಸಾಸಲಹಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ವತಿಯಿಂದ ಆಯೋಜಿಸಿದ ಶೌಚಾಲಯ ಬಳಕೆ ಹಾಗೂ ಕೊಳೆನೀರು ಮತ್ತು ತ್ಯಾಜ್ಯ ವಿಲೇವಾರಿ ಜನಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದರು. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಇಲಾಖೆಯ ಹಲವಾರು ಕಾರ್ಯಚಟುವಟಿಕೆಗಳು ಶ್ಲಾಘನೀಯವೆಂದು ಹೇಳಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮಾಡಲು ಸ್ವಚ್ಛತೆ ಬಹುಮುಖ್ಯವಾಗಿದೆ. ಹಾಗಾಗಿ ಸಾರ್ವಜನಿಕರು ಇದರ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ತಾಲ್ಲೂಕು ಪಂಚಾಯಿತಿ ಸದಸ್ಯರಾದ ಚೌಡಮ್ಮ ತಿಳಿಸಿದರು.

ಪ್ರತಿಯೊಂದು ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಆಂದೋಲನ ನಡೆಸಿ ನಾಗರಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಉಪನ್ಯಾಸಕಿ ಚಂದ್ರಕಲಾ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳಿಂದ ಬೀದಿನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಶಿವಕುಮಾರ್, ತಾ.ಪಂ. ಸದಸ್ಯರಾದ ಚಂದ್ರಮ್ಮ, ಚಂದ್ರಶೇಖರ್, ಪ್ರಕಾಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Be the first to comment on "ಸ್ವಚ್ಛತೆ ನಮ್ಮೆಲ್ಲರ ಕರ್ತವ್ಯ : ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ"

Leave a comment

Your email address will not be published.


*