ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ವೀಕ್ಷಕರಾದ ಬಲ್ಕೀಶ್ ಬಾನು ಕರೆ

Share
  • 24
    Shares

ದಾವಣಗೆರೆ: ದಾವಣಗೆರೆ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳ ಸಭೆ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿ ಡಾ|| ಎಸ್ಸೆಸ್ ಭವನದಲ್ಲಿ ನಡೆಯಿತು.
ಈ ಸಭೆಗೆ ವೀಕ್ಷಕರಾಗಿ ಕೆಪಿಸಿಸಿ ಕಾರ್‍ಯದರ್ಶಿಗಳಾದ ಶ್ರೀಮತಿ ಬಲ್ಕೀಶ್ ಬಾನು ಅವರು ಸಭೆಗೆ ಆಗಮಿಸಿ ಮುಂಬರುವ ದಿನಗಳಲ್ಲಿ ಬರುವ ವಿಧಾನಸಭಾ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸು ವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನತೆಗೆ ತಿಳಿಸುವುದರ ಜೊತೆಗೆ ಈ ಹಿಂದೆ ರಾಜ್ಯದಲ್ಲಿ ದುರಾಡಳಿತ ನಡೆಸಿದ ಬಿಜೆಪಿ ಇಂದು ಕೇಂದ್ರದಲ್ಲಿ ಆಡಳಿತ ನಡೆಸಿದರೂ ಸಹ ಆ ಆಡಳಿತ ಜನಪರವಾಗಿರದೇ ಕೆಲವೇ ಕೆಲವು ಉದ್ದಿಮೆದಾರರಿಗೆ ಅನುಕೂಲವಾಗುವ ಆಡಳಿತವಾಗಿದ್ದು, ಅದನ್ನು ಸಹ ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು.
ಸಭೆಯಲ್ಲಿ ದಾವಣಗೆರೆ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ಉತ್ತರ, ಜಗಳೂರು, ಮಾಯಕೊಂಡ ಮತ್ತು ಚನ್ನಗಿರಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಪಕ್ಷದ ಬ್ಲಾಕ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಓಬಿಸಿ ಅಧ್ಯಕ್ಷ ನಲ್ಕುಂದ ಹಾಲೇಶ್, ಲೀಗಲ್ ಸೆಲ್ ಅಧ್ಯಕ್ಷ ಪ್ರಕಾಶ್ ಪಾಟೀಲ್, ಕಾರ್‍ಯದರ್ಶಿ ಎ.ನಾಗರಾಜ್, ಮತ್ತಿತರರಿದ್ದರು.

Be the first to comment on "ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ವೀಕ್ಷಕರಾದ ಬಲ್ಕೀಶ್ ಬಾನು ಕರೆ"

Leave a comment

Your email address will not be published.


*