ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ : ಪ್ರಾಣಿ ಬಲಿ ನಿಷೇಧ-ಜಿಲ್ಲಾಧಿಕಾರಿ ಡಿ.ಎಸ್ ರಮೇಶ್

Share
  • 49
    Shares

ದಾವಣಗೆರೆ- ಫೆ. 27 ಮತ್ತು 28ರಂದು ನಗರದಲ್ಲಿ ನಡೆಯುವ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವವನ್ನು ಯಾವುದೇ ಪ್ರಾಣಿ ಬಲಿ ನೀಡದೆ ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದುರ್ಗಾಂಬಿಕಾ ಜಾತ್ರಾ ಮಹೋತ್ಸವದಲ್ಲಿ ಮೂಲಭೂತ ಸೌಕರ್ಯ ಹಾಗೂ ಪ್ರಾಣಿ ಬಲಿ ನಿಷೇಧ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಕರೆಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಪಾಲಿಕೆ ಮೇಯರ್ ಅನಿತಾಬಾಯಿ ಮಾಲತೇಶ್, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಭೀಮಶಂಕರ್ ಗುಳೇದ್, ಉಪವಿಭಾಗಾಧಿಕಾರಿ ಸಿದ್ದೇಶ್, ಮಹಾನಗರಪಾಲಿಕ ಆಯುಕ್ತ ಮಂಜುನಾಥ್ ಬಳ್ಳಾರಿ, ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment on "ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ : ಪ್ರಾಣಿ ಬಲಿ ನಿಷೇಧ-ಜಿಲ್ಲಾಧಿಕಾರಿ ಡಿ.ಎಸ್ ರಮೇಶ್"

Leave a comment

Your email address will not be published.


*