ದಾವಣಗೆರೆ : ಫೆ. 25 ರಂದು ಕೆ.ಎಸ್.ಸಿ.ಎ. ಸ್ಟೇಡಿಯಂಗೆ ಶಂಕುಸ್ಥಾಪನೆ

Share
  • 359
    Shares

ದಾವಣಗೆರೆ: ದಾವಣಗೆರೆ ಸ್ಮಾರ್ಟ್‌ಸಿಟಿ ಆಗುವ ಮುನ್ನವೇ ದಾವಣಗೆರೆ ನಗರವನ್ನು ಸುಂದರ ನಗರವನ್ನಾಗಿಸಲು ಪಣತೊಟ್ಟಿರುವ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇದೀಗ ಸುಂದರ ನಗರದ ಕ್ರಿಕೆಟ್ ಆಟಗಾರರಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ (ಕೆಎಸ್‌ಸಿಎ) ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಸುಮಾರು 8.25 ಎಕರೆ ಜಮೀನನ್ನು ಮಂಜೂರು ಮಾಡಿಸಿದ್ದಾರೆ.
ಈ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ದಿನಾಂಕ:25-02-2018 ರಂದು ಮದ್ಯಾಹ್ನ 12-30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನೇರೆವೇರಿಸುವರು. ಅಧ್ಯಕ್ಷತೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಹೆಚ್.ರಾಮಚಂದ್ರಪ್ಪ ವಹಿಸುವರು.

Be the first to comment on "ದಾವಣಗೆರೆ : ಫೆ. 25 ರಂದು ಕೆ.ಎಸ್.ಸಿ.ಎ. ಸ್ಟೇಡಿಯಂಗೆ ಶಂಕುಸ್ಥಾಪನೆ"

Leave a comment

Your email address will not be published.


*