ಕೆ.ಎಸ್.ಸಿ.ಎ. ಸ್ಟೇಡಿಯಂಗೆ ಶಂಕುಸ್ಥಾಪನೆ

Share
  • 175
    Shares

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ದಾವಣಗೆರೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ,(ಕೆಎಸ್‌ಸಿಎ) ಬೆಂಗಳೂರು ಇವರುಗಳ ವತಿಯಿಂದ ನಗರದ ಜೆ ಹೆಚ್ ಪಟೇಲ್ ಬಡಾವಣೆಯಲ್ಲಿ ಇಂದು ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಮೈದಾನಕ್ಕೆ ಭೂಮಿಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಸಂಜಯ್ ದೇಸಾಯಿ,ಅಂತರಾಷ್ಟ್ರೀಯ ಕ್ರಿಕೆಟ್‌ಪಟು ಆರ್. ವಿನಯ್‌ಕುಮಾರ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.ಹೆಚ್.ರಾಮಚಂದ್ರಪ್ಪ ,ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕೊಂಡಜ್ಜಿ, ಪಾಲಿಕೆ ಉಪ ಮಹಾಪೌರರಾದ ಶ್ರೀಮತಿ ನಾಗರತ್ನಮ್ಮ, ಪಾಲಿಕೆ ಸದಸ್ಯರುಗಳಾದ ಎಸ್.ಜಿ.ಹನುಮಂತಪ್ಪ, ತಿಪ್ಪಣ್ಣ, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ದೂಡಾ ಆಯುಕ್ತರಾದ ಆದಪ್ಪ ಮತ್ತಿತರರು ಹಾಜರಿದ್ದರು.

Be the first to comment on "ಕೆ.ಎಸ್.ಸಿ.ಎ. ಸ್ಟೇಡಿಯಂಗೆ ಶಂಕುಸ್ಥಾಪನೆ"

Leave a comment

Your email address will not be published.


*