ರಾಜ್ಯವನ್ನು ಹಸಿವು ಮುಕ್ತಗೊಳಿಸುವ ಕನಸು ನನಸಾಗಿದೆ : ಸಿ ಎಂ ಸಿದ್ದರಾಮಯ್ಯ

Share
  • 524
    Shares

ದಾವಣಗೆರೆ – ಶ್ರಮಿಕ ವರ್ಗ ಹಸಿದು ಮಲಗಬಾರದು, ಪ್ರತಿಯೊಬ್ಬರು ಎರಡು ಹೊತ್ತಿನ ಊಟ ಮಾಡಬೇಕೆಂಬ ಉದ್ದೇಶದಿಂದ ಅನ್ನಭಾಗ್ಯ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಟಾನಗೊಳಿಸಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಲ್ಲಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುವ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದಾವಣಗೆರೆ ನಗರದಲ್ಲಿ ಇಂದು ಐತಿಹಾಸಿಕ ದಿನವಾಗಿದ್ದು ರೂ.೧೦೭೬.೨೨ ಕೋಟಿ ಅಂದಾಜು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಇಂದು ಕೈಗೊಳ್ಳಲಾಗುತ್ತಿದೆ ಎಂದರು.


ಕೃಷಿ ಉತ್ಪನ್ನ ಮತ್ತು ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಮಾತನಾಡಿ, ದೇಶದಲ್ಲೇ ನಂ. ರಾಜ್ಯ ಮಾಡುವೆಡೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರ ಈ ಐದು ವರ್ಷಗಳಲ್ಲಿ ದಾವಣಗೆರೆ ನಗರ ಸೇರಿದಂತೆ ರಾಜ್ಯಾದ್ಯಂತ ಶಾಶ್ವತ ಕಾಮಗಾರಿಗಳನ್ನು ಕೈಗೊಂಡಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ೪.೧೯ ಕೋಟಿ ಮೊತ್ತದಲ್ಲಿ ಕುಡಿಯುವ ನೀರಿನ ಯೋಜನೆ ಉದ್ಘಾಟನೆ, ೨.೫ ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮಾಡಲಾಗುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಶಾಸಕರಾದ ಕೆ ಶಿವಮೂರ್ತಿ ನಾಯಕ್, ಹೆಚ್ ಪಿ ರಾಜೇಶ್, ಮಹಾನಗರಪಾಲಿಕೆ ಮೇಯರ್ ಅನಿತಾಬಾಯಿ ಮಾಲತೇಶ್, ಉಪ ಮೇಯರ್ ನಾಗರತ್ನಮ್ಮ, ಜಿ ಪಂ ಸದಸ್ಯ ಬಸವಂತಪ್ಪ, ಪಾಲಿಕೆ ಸದಸ್ಯ ದಿನೇಶ್ ಶೆಟ್ಟಿ, ಶಿವನಹಳ್ಳಿ ರಮೇಶ್, ಹಾಲೇಶ್, ಅಶ್ವಿನಿ ಪ್ರಶಾಂತ್, ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಡಿ ಬಸವರಾಜು, ಅಯೂಬ್ ಪೈಲ್ವಾನ್ ಜಿಲ್ಲಾಧಿಕಾರಿ ಡಿ ಎಸ್ ರಮೇಶ್, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಡಾ. ಭೀಮಾಶಂಕರ್ ಗುಳೇದ್, ಜಿ ಪಂ ಸಿಇಓ ಎಸ್ ಅಶ್ವತಿ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.

1 Comment on "ರಾಜ್ಯವನ್ನು ಹಸಿವು ಮುಕ್ತಗೊಳಿಸುವ ಕನಸು ನನಸಾಗಿದೆ : ಸಿ ಎಂ ಸಿದ್ದರಾಮಯ್ಯ"

  1. Cangratulation…

Leave a comment

Your email address will not be published.


*