ದಾವಣಗೆರೆಯಲ್ಲಿ ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ

Share
  • 135
    Shares

ದಾವಣಗೆರೆ -ನಿರುದ್ಯೋಗ ಯುವಜನತೆ ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ನೀಡುವ ತರಬೇತಿಗಳ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗ ಆರಂಭಿಸಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.
ನಗರದ ನಿಟ್ಟುವಳ್ಳಿಯ ಭಗೀರಥ ಸರ್ಕಲ್‌ನ ಕರಿಯಮ್ಮ ದೇವಸ್ಥಾನ ಹತ್ತಿರದ ಅಬಿಶ್ರೀ ಟವರ್‍ಸ್‌ನಲ್ಲಿ ಇಂದು ಪ್ರಾರಂಭಿಸಲಾದ ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ದಾವಣಗೆರೆ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
2016 ರ ಜುಲೈನಲ್ಲಿ ಪ್ರಧಾನಮಂತ್ರಿಗಳು ಕೌಶಲ್ಯಾಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು. ಇಂದು ಭಾರತ ಸೇರಿದಂತೆ ಜಗತ್ತಿನ ಎಲ್ಲೆಡೆ ಕೌಶಲ್ಯ ಪಡೆದವರಿಗೆ ಬೇಡಿಕೆ ಇದೆಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮಂಜುಳಾ ಟಿ.ವಿ.ರಾಜು, ಪಾಲಿಕೆ ಸದಸ್ಯ ಡಿ.ಕೆ.ಕುಮಾರ್ ಇತರರು ಉಪಸ್ಥಿತರಿದ್ದರು.

Be the first to comment on "ದಾವಣಗೆರೆಯಲ್ಲಿ ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ"

Leave a comment

Your email address will not be published.


*