ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ದಿನಾಚರಣೆ

Share
  • 54
    Shares

ದಾವಣಗೆರೆ: ನಾರಿ ಕಲಿತರೆ ಊರಿಗೆ ಉಪಕಾರಿ ಎಂಬುದಕ್ಕೆ ಇಂದು ಅನೇಕ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪನ್ನು ಮೂಡಿಸಿರುವ ಉದಾಹರಣೆ ನೀಡಬಹುದು ಎಂದು ಮಾಜಿ ಸಚಿವರೂ, ಶಾಸಕರಾದ ಡಾ||ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್‍ಯಕ್ರಮದಲ್ಲಿ ಸಾಧಕ ಮಹಿಳೆಯರನ್ನು ಸನ್ಮಾನಿಸಿದರು.
ಮಹಿಳಾ ದಿನಾಚರಣೆ ಅಂಗವಾಗಿ ಮಹಾಪೌರರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ಡಾ|| ಶುಕ್ಲಶೆಟ್ಟಿ, ವನಿತಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ಲತಿಕಾ ದಿನೇಶ್ ಶೆಟ್ಟಿ, ಶ್ರೀಮತಿ ಜಯಮ್ಮ, ಶ್ರೀಮತಿ ಉಮಾ, ಶ್ರೀಮತಿ ಕಮಲಾ, ವಿಜಯಲಕ್ಷ್ಮಿ ಅಕ್ಕಿ, ಹಿಂದುಳಿದ ವರ್ಗಗಳ ಕಾರ್ಯದರ್ಶಿ ಗೀತಾ, ಕೊಟ್ರಮ್ಮ, ಗೌರಮ್ಮ ಅವರುಗಳನ್ನು ಸನ್ಮಾನಿಸಲಾಯಿತು.
ಶ್ರೀಮತಿ ಅಶ್ವಿನಿ ಪ್ರಶಾಂತ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್‍ಯಕ್ರಮದಲ್ಲಿ ಪ್ರಧಾನಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ದಾವಣಗೆರೆ ತಾಲ್ಲೂಕು ಪಂಚಾಯತ ಸದಸ್ಯರಾದ ಶ್ರೀಮತಿ ಆಶಾ ಮುರುಳಿ, ಶ್ರೀಮತಿ ಶುಭಮಂಗಳ, ಮತ್ತಿತರರಿದ್ದರು.

Be the first to comment on "ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ದಿನಾಚರಣೆ"

Leave a comment

Your email address will not be published.


*