ದಾವಣಗೆರೆಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ

Share
  • 105
    Shares

ವಿಶ್ವ ಆರೋಗ್ಯ ದಿನದ ಅಂಗವಾಗಿ ಏಪ್ರಿಲ್ ೭ ರಂದು ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ, ಜ.ಜ.ಮು. ವೈದ್ಯಕೀಯ ಮಹಾವಿದ್ಯಾಲಯ, ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಬಾಪೂಜಿ ದಂತ ವೈದ್ಯಕೀಯ ಕಾಲೇಜ್, ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ವೈದ್ಯರುಗಳು ಜನ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.ಜಾಥಾಕ್ಕೆ ಡಾ: ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
         ಈ ಜಾಥಾದಲ್ಲಿ ಎಸ್. ಎಸ್. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ||ಬಿ.ಎಸ್.ಪ್ರಸಾದ್, ಉಪ ಪ್ರಾಂಶುಪಾಲರಾದ ಡಾ|| ಅರುಣಕುಮಾರ್ ಅಜ್ಜಪ್ಪನವರ್, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ|| ಜಯಸಿಂಹ, ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ಎಸ್.ಬಿ.ಮುರುಗೇಶ್, ವೈದ್ಯಕೀಯ ನಿರ್ದೇಶಕರಾದ ಡಾ|| ಧನಂಜಯ, ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ಸದಾಶಿವಶೆಟ್ಟಿ, ದಂತ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ|| ವಸುಂದರಾ ಶಿವಣ್ಣ, ಸಮುದಾಯ ಆರೋಗ್ಯ ವಿಭಾಗದ ಡಾ|| ಆರ್.ಜಿ.ಗೀತಾಲಕ್ಷ್ಮೀ, ಡಾ|| ಲತಾ, ಡಾ|| ಶಾಂತಲಾ, ರವಿ, ಬಾಪೂಜಿ ಮತ್ತು ಎಸ್.ಎಸ್. ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರುಗಳು, ಸಿಬ್ಬಂದಿವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಭಾಗವಹಿಸಿದ್ದರು.

Be the first to comment on "ದಾವಣಗೆರೆಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ"

Leave a comment

Your email address will not be published.


*