ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ದಾವಣಗೆರೆ ಜಿಲ್ಲೆಯಲ್ಲೂ ಬಂದ್‍ಗೆ ಕರೆ

Share
  • 47
    Shares
ದಾವಣಗೆರೆ – ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ಮೇ 28ರಂದು ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲೂ ಬಂದ್‍ಗೆ ಕರೆ ನೀಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಈಗ ಆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಕೂಡಲೇ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
.ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಒಂದು ಹೇಳಿಕೆ, ಅಧಿಕಾರಕ್ಕೆ ಬಂದ ನಂತರ ಮತ್ತೊಂದು ಹೇಳಿಕೆ ನೀಡಿ, ಮಾತಿಗೆ ತಪ್ಪಿ ನಡೆಯುತ್ತಿದೆ ಎಂದು ಆರೋಪಿಸಿದರು.ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಮೇ 28ರಂದು ರಾಜ್ಯ ಬಂದ್‍ಗೆ ಬಿಜೆಪಿ ಕರೆ ನೀಡಿದ ಹಿನ್ನಲೆಯಲ್ಲಿ ಅಂದು ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು, ಎಪಿಎಂಪಿ ವಹಿವಾಟು ಸೇರಿದಂತೆ ಎಲ್ಲವನ್ನು ಬಂದ್ ಮಾಡಲಾಗುತ್ತದೆ ಎಂದರು.ಎಲ್ಲಾ ರೈತರು, ರೈತ ಸಂಘಟನೆಗಳ ಮುಖಂಡರು, ಸಂಘ-ಸಂಸ್ಥೆಯವರು, ಕಾರ್ಮಿಕರು, ವ್ಯಾಪಾರಸ್ಥರು, ಆಟೋ ಚಾಲಕರು, ಬಸ್ ಸಂಸ್ಥೆಯವರು ಬಂದ್‍ಗೆ ಬೆಂಬಲಿಸಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಹೆಚ್.ಎನ್.ಶಿವಕುಮಾರ್, ರಮೇಶ್ ನಾಯಕ್, ಪೀಸಾಳೆ ಕೃಷ್ಣ, ಬೇತೂರು ಬಸವರಾಜ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Be the first to comment on "ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ದಾವಣಗೆರೆ ಜಿಲ್ಲೆಯಲ್ಲೂ ಬಂದ್‍ಗೆ ಕರೆ"

Leave a comment

Your email address will not be published.


*