ಎಲ್ಲಾ ವರ್ಗದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಬಸ್ ಪಾಸ್ ಗಾಗಿ ಎಬಿವಿಪಿ ಧರಣಿ

Share
  • 35
    Shares

ದಾವಣಗೆರೆ – ಎಲ್ಲಾ ವರ್ಗದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಅಖಿಲ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಇಲ್ಲಿನ ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಳೆದ ಸಾಲಿನ ಬಜೆಟ್‍ನಲ್ಲಿ ಎಸ್‍ಸಿ, ಎಸ್‍ಟಿ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸರಕಾರ ಘೋಷಣೆ ಮಾಡಿದರೂ ಇದುವರೆಗೂ ಜಾರಿಗೆ ತರದಿರುವುದ್ಕಕೆ ಆಕ್ರೋಶ ವ್ಯಕ್ತಪಡಿಸಲಾಯಿತು.ಪ್ರಸ್ತುತ ರಾಜ್ಯದ ಸಮ್ಮಿಶ್ರ ಸರಕಾರ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತವಾಗಿ ಬಸ್‍ಪಾಸ್ ನೀಡಿ, ಉಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸ್‍ಗಾಗಿ ಅರ್ಜಿ ಸಲ್ಲಿಸಿದ್ದಾರೆ.ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವುದರಿಂದ ಅತಿಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬರಲು ಪ್ರೋತ್ಸಾಹ ನೀಡಿದಂತಾಗುತ್ತದೆ. ರಾಜ್ಯದ ಬೊಕ್ಕಸಕ್ಕೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದು ಎಂದಿದ್ದಾರೆ.ಈ ಬಗ್ಗೆ ಸಾರಿಗೆ ಸಚಿವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಚರ್ಚೆ ಮಾಡಿ, ಉಚಿತ ಬಸ್ ಪಾಸ್ ವಿತರಿಸಬೇಕು. ಇಲ್ಲದಿದ್ದರೆ ರಾಜ್ಯಾಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು. ರಾಜ್ಯದ ಶಾಸಕರೂ ಕೂಡಾ ಕಾಳಜಿ ವಹಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಕೊಡಬೇಕೆಂದರು ಆಗ್ರಹಿಸಿದರು.

Be the first to comment on "ಎಲ್ಲಾ ವರ್ಗದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಬಸ್ ಪಾಸ್ ಗಾಗಿ ಎಬಿವಿಪಿ ಧರಣಿ"

Leave a comment

Your email address will not be published.


*