ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ದ್ವೇಷದ ರಾಜಕಾರಣ-ಬಿಜೆಪಿ ಆರೋಪ

Share
  • 24
    Shares

ದಾವಣಗೆರೆ- ಇಲ್ಲಿನ ಮಹಾನಗರ ಪಾಲಿಕೆ ಸದಸ್ಯರುಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿರುವುದಕ್ಕೆ ಸಾರ್ವಜನಿಕರ ಮೇಲೆ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುಕುಂದಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಾಲಿಕೆ ಸದಸ್ಯರು ಜನರ ಸಮಸ್ಯೆಗಳಿಗೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇಲ್ಲಿನ ವಿನೋಬನಗರ, ಎಂಸಿಸಿ ಕಾಲೋನಿ, ಪಿಜೆ ಬಡಾವಣೆ, ಆಂಜನೇಯ, ಸಿದ್ದವೀರಪ್ಪ ಬಡಾವಣೆ ಸೇರಿದಂತೆ ವಿವಿಧೆಡೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ದಿನದಿಂದಲೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸಮರ್ಪಕವಾಗಿ ಕಸವಿಲೇವಾರಿವಾಗುತ್ತಿಲ್ಲ. ನೀರುಸರಬರಾಜು ವಿಳಂಬವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಪಾಲಿಕೆ ಸದಸ್ಯರನ್ನು ಪ್ರಶ್ನಿಸಿದರೆ ಬಿಜೆಪಿ ಗೆಲ್ಲಿಸಿದ್ದೀರಾ ಅವರನ್ನೇ ಕೇಳಿಕೊಳ್ಳಿ ಎಂದು ರೇಗುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಪಾಲಿಕೆ ಸದಸ್ಯರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ. ನಿಜವಾಗಲು ರಾಜೀನಾಮೆ ಸಲ್ಲಿಸಬೇಕು ಎಂದಿದ್ದರೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಚುನಾವಣೆಗೆ ಅನುವು ಮಾಡಿಕೊಡಬೇಕು. ಆಯುಕ್ತರು, ಅಧಿಕಾರಿಗಳು ನಿಷ್ಕ್ರೀಯವಾಗಿರುವ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಿ ಈ ಕೂಡಲೇ ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡಬೇಕೆಂದು ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ. ಇದೇ ರೀತಿ ಪಾಲಿಕೆ ಸದಸ್ಯರು ವರ್ತಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹೆಚ್.ಎನ್.ಶಿವಕುಮಾರ್, ಶಿವರಾಜ್ ಪಾಟೀಲ್, ಎ.ವೈ.ಪ್ರಕಾಶ್, ವಸಂತಕುಮಾರ್, ಎಂ.ಎಸ್.ವಿಠಲ್ ಇದ್ದರು.

Be the first to comment on "ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ದ್ವೇಷದ ರಾಜಕಾರಣ-ಬಿಜೆಪಿ ಆರೋಪ"

Leave a comment

Your email address will not be published.


*