ಪಠ್ಯಪುಸ್ತಕ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳು ವಿದ್ಯಾಭ್ಯಾಸಕ್ಕೆ ಪರಿಪೂರ್ಣತೆ ಬರುತ್ತದೆ-ಶೋಭಾ ಪಲ್ಲಾಗಟ್ಟೆ

Share
  • 15
    Shares

ದಾವಣಗೆರೆ-ಪ್ರಸ್ತುತ ದಿನಮಾನಗಳಲ್ಲಿ ಯುವಪೀಳಿಗೆ, ಮಕ್ಕಳಿಗೆ ಹೊಸ ತಂತ್ರಜ್ಞಾನದ ಕಂಪ್ಯೂಟರ್ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಡಲು ಸಾಕಷ್ಟು ಸದಾವಕಾಶಗಳಿವೆ. ವಿದ್ಯಾಭ್ಯಾಸದ ಹಠ್ಯಪುಸ್ತಕದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ತೊಡಗಿಸಿಕೊಂಡರೆ ವಿದ್ಯಾಭ್ಯಾಸಕ್ಕೆ ಪರಿಪೂರ್ಣತೆ ಬರುತ್ತದೆ. ಸ್ಕೇಟಿಂಗ್‌ನಂತಹ ಕ್ರೀಡೆ ಸಹ ವ್ಯಾಯಾಮದ ಜತೆಯಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಮುಕ್ತ ಅವಕಾಶವಾಗುತ್ತದೆ. ಈ ನಿಟ್ಟಿನಲ್ಲಿ ದಾವಣಗೆರೆಯ ದೇವನಗರಿ ರೋಲರ್ ಸ್ಕೇಟಿಂಗ್ ಸಂಸ್ಥೆ ದಾವಣಗೆರೆಯ ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ನೀಡಿ ಅವರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಿ ರೂಪಿಸುವಲ್ಲಿ ಯಶಸ್ವಿಯಾಗುತ್ತಿರುವುದು ಶ್ಲಾಘನೀಯ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಶೋಭಾ ಪಲ್ಲಾಗಟ್ಟೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ದಾವಣಗೆರೆಯ ದೇವನಗರಿ ರೋಲರ್ ಸ್ಕೇಟಿಂಗ್ ಸಂಸ್ಥೆಯ ರಿಂಕ್‌ನಲ್ಲಿ ಸಂಸ್ಥೆ ಹಮ್ಮಿಕೊಂಡ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ, ಶಿಬಿರಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಮಹಾನಗರ ಪಾಲಿಕೆ ಸದಸ್ಯರಾದ ಲಿಂಗರಾಜ್, ಡಾ. ಶಂಕರ್ ಮುಂತಾದವರು ಮಾತನಾಡಿದರು. ಬಹುಮಾನ ವಿಜೇತ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷರಾದ ನರೇಂದ್ರ ಬಿ.ಆರ್., ಸಂಸ್ಥೆಯ ನಿರ್ದೇಶಕರಾದ ಮಲ್ಲೇಶ್‌ಗೌಡ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ವನಮಾಲರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭಕ್ಕೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ತರಬೇತುದಾರರಾದ ನಿರಂಜನಬಾಬುರವರು ಸ್ವಾಗತಿಸಿದರು. ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಯವರು ಪ್ರೇಕ್ಷಕರಿಗೆ ರಸರಂಜನೆ ನಡೆಸಿ ಕಾರ್ಯಕ್ರಮ ನಿರೂಪಿಸಿದರು.
ಸ್ಕೇಟಿಂಗ್‌ನಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ದಾವಣಗೆರೆಯ ಗೌರಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕೊನೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಅನುಸೂಯ ನಿರಂಜನಬಾಬು ರವರು ವಂದಿಸಿದರು.

Be the first to comment on "ಪಠ್ಯಪುಸ್ತಕ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳು ವಿದ್ಯಾಭ್ಯಾಸಕ್ಕೆ ಪರಿಪೂರ್ಣತೆ ಬರುತ್ತದೆ-ಶೋಭಾ ಪಲ್ಲಾಗಟ್ಟೆ"

Leave a comment

Your email address will not be published.


*