ಪೌರಕಾರ್ಮಿಕರ ವಸತಿ ಸಮುಚ್ಛಯ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ

Share
  • 62
    Shares

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದ ಗೃಹ ಭಾಗ್ಯ ಯೋಜನೆಯಡಿ ದೊಡ್ಡಬೂದಿಹಾಳ್ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ವಸತಿ ಸಮುಚ್ಛಯ ನಿರ್ಮಾಣಕ್ಕೆ ಮಾಜಿ ಸಚಿವರೂ, ಹಾಲಿ ಶಾಸಕರೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಭಾನುವಾರ ಭೂಮಿಪೂಜೆ ನೇರವೇರಿಸಿದರು.
ನಂತರ ಪೌರಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಶಾಮನೂರು ಶಿವಶಂಕರಪ್ಪನವರು ದೊಡ್ಡಬೂದಿಹಾಳ್ ಗ್ರಾಮದ ಸರ್ವೇ ನಂ.೧೧೨ರಲ್ಲಿ ಸುಮಾರು ೧೦ ಎಕರೆ ಪ್ರದೇಶದಲ್ಲಿ ಜಿ+೧ ಮಾದರಿಯ ೯೫ ಸಮುಚ್ಚಯಗಳನ್ನು ನಿರ್ಮಿಸಲಾಗುವುದು ಎಂದರು.
ಈ ಸಮುಚ್ಛಯದಲ್ಲಿ ಒಟ್ಟು ೩೮೧ ಮನೆಗಳು ನಿರ್ಮಾಣಗೊಳ್ಳಲಿದ್ದು, ಅರ್ಹ ಪೌರ ಕಾರ್ಮಿಕರಿಗಷ್ಟೇ ಮನೆಗಳನ್ನು ಹಂಚಿಕೆ ಮಾಡಲಾಗುವುದು. ಗುತ್ತಿಗೆದಾರರಿಗೆ ೧೮ ತಿಂಗಳು ಕಾಲಾವಕಾಶ ನೀಡಲಾಗಿದ್ದರೂ ಸಹ ೮-೧೦ ತಿಂಗಳಲ್ಲಿ ಮನೆ ನಿರ್ಮಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಉತ್ತಮ ಗುಣಮಟ್ಟದಲ್ಲಿ ಮನೆ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಪ್ರತಿ ಮನೆ ನಿರ್ಮಾಣಕ್ಕೆ ಸುಮಾರು ೮ ಲಕ್ಷ ರೂ ವೆಚ್ಛವಾಗಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಶೇ. ೮೦ ರಷ್ಟು ಇನ್ನುಳಿದ ಶೇ. ೨೦ನ್ನು ಪೌರಕಾರ್ಮಿಕರು ಭರಿಸಲಿರುವರು. ವಸತಿ ಸಮುಚ್ಚಯಕ್ಕೆ ನಾಗರಿಕ ಸೌಲಭ್ಯಗಳನ್ನು ಸಹ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಕಾಮಗಾರ ಕಳೆದ ೨ ವರುಷಗಳ ಹಿಂದೆಯೇ ಆರಂಭಗೊಳ್ಳಬೇಕಾಗಿದ್ದರೂ ಸಹ ಕೆಲವು ಅಡಚಣೆಗಳಿಂದ ಇಂದು ಕಾಮಗಾರಿ ಆರಂಭಗೊಳ್ಳುತ್ತಿದೆ ಎಂದ ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸುಮಾರು ೭೦೦ ಎಕರೆ ಪ್ರದೇಶ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಪೌರ ಕಾರ್ಮಿಕರ ಸಂಘದ ನೀಲಗಿರಿಯಪ್ಪ ಸ್ವಾಗತಿಸಿದರು. ಮಹಾನಗರ ಪಾಲಿಕೆ ಸದಸ್ಯ ಎಂ.ಹಾಲೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಾಪೌರರಾದ ಶ್ರೀಮತಿ ಶೋಭಾ ಪಲ್ಲಾಗಟ್ಟೆ, ಉಪಮಹಾಪೌರರಾದ ಚಮನ್ ಸಾಬ್, ಆಯುಕ್ತರಾದ ಮಂಜುನಾಥ್ ಬಳ್ಳಾರಿ, ಸದಸ್ಯರುಗಳಾದ ಶ್ರೀಮತಿ ಅನಿತಾಬಾಯಿ, ದಿನೇಶ್ ಕೆ.ಶೆಟ್ಟಿ, ಬಸಪ್ಪ, ಎಲ್.ಎಂ.ಹನುಮಂತಪ್ಪ, ಪೌರ ಕಾರ್ಮಿಕರ ಸಂಘದ ಬಿ.ಹೆಚ್.ವೀರಭದ್ರಪ್ಪ, ಮಾಜಿ ಡೂಡಾ ಅಧ್ಯಕ್ಷರಾದ ಮಾಲತೇಶ್ ಪೈಲ್ವನ್, ನಗರಸಭೆ ಮಾಜಿ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಮಾಜಿ ಸದಸ್ಯ ಎಸ್.ಮಲ್ಲಿಕಾರ್ಜುನ್, ಟಿ.ರಮೇಶ್, ಅಣ್ಣಪ್ಪ, ಸಾಗರ್, ಆಧೀಕ್ಷಕ ಅಭಿಯಂತರರಾದ ಸತೀಶ್, ಹೆಚ್.ಎನ್.ರಾಜು, ರಾಮಚಂದ್ರಪ್ಪ, ಆರೋಗ್ಯ ನಿರೀಕ್ಷಕರುಗಳು ಮತ್ತಿತತರರು ಉಪಸ್ಥಿತರಿದ್ದರು

Be the first to comment on "ಪೌರಕಾರ್ಮಿಕರ ವಸತಿ ಸಮುಚ್ಛಯ ನಿರ್ಮಾಣಕ್ಕೆ ಶಾಸಕರಿಂದ ಭೂಮಿಪೂಜೆ"

Leave a comment

Your email address will not be published.


*