ಎಸ್‌ಎಸ್ ಗೆ ಸಚಿವ ಸ್ಥಾನ ನೀಡಲು ಪಟ್ಟು- ಬೆಂಗಳೂರು ಚಲೋ

Share
  • 54
    Shares

ದಾವಣಗೆರೆ -ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೇಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳು ಹಾಗೂ ಕಾಂಗ್ರೇಸ್ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಳೆ ಬೆಂಗಳೂರಿನ ಕೆಪಿಸಿಸಿ ಕಛೇರಿಗೆ ತೆರಳಿ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹೆಚ್ ಬಿ ಮಂಜಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು ನಾಳೆ ಬೆಳಗ್ಗೆ ದಾವಣಗೆರೆಯಿಂದ ಸುಮಾರು ೫೦ ಬಸ್ ಗಳಲ್ಲಿ ಬೆಂಗಳೂರಿಗೆ ತೆರಳಲಿದ್ದೇವೆ.ಕಾಂಗ್ರೇಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಪ್ರಥಮ ಸಂಪುಟವಿಸ್ತರಣೆಯಲ್ಲಿ ಕಾಂಗ್ರೇಸ್ ಪಕ್ಷದ ಹಿರಿಯ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪನವರಿಗೆ ಅವಕಾಶ ನೀಡದಿರುವುದರಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ತಾವು ಹೊಂದಿರುವ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳೂ ಆಗಿರುವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸುತ್ತಿದ್ದೇವೆ. ಕಾಂಗ್ರೇಸ್ ಪಕ್ಷದ ಕಟ್ಟಾಳು ಶಾಮನೂರು ಶಿವಶಂಕರಪ್ಪನವರು ಒಮ್ಮೆ ಅವಿಭಜಿತ ಚಿತ್ರದುರ್ಗ ಜಿಲ್ಲೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೇ ೩-೪ ದಶಕಗಳ ಕಾಲ ಕೆಪಿಸಿಸಿ ಖಜಾಂಚಿ ಆಗಿದ್ದರು. ಇದರ ಜೊತೆಗೆ ಒಮ್ಮೆ ಸಂಸದರಾಗಿ ೫ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಕಳೆದ ಸಚಿವ ಸಂಪುಟದಲ್ಲಿ ತೋಟಗಾರಿಕೆ ಹಾಗೂ ಎಪಿಎಂಸಿ ಸಚಿವರಾಗಿದ್ದ ವೇಳೆ ಅವರು ಎಪಿಎಂಸಿಗಳಲ್ಲಿ ರೈತರಿಗೆ ಅನ್ಯಾಯವಾಗುವುದನ್ನು ತಡೆಯಲು ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದು ದೇಶಕ್ಕೆ ಮಾದರಿಯಾಗಿದ್ದರು. ಇಂತಹ ಜನಪರತೆಯ ಶಾಮನೂರು ಅವರಿಗೆ ಸಚಿವ ಸ್ಥಾನ ನೀಡದಿರುವುದು ಖಂಡನೀಯ. ಪಕ್ಷದ ಹೈಕಮಾಂಡ್ ತೀರ್ಮಾನ ನೋವು ತಂದಿದೆ. ಇನ್ನೂ ೬ ಸ್ಥಾನಗಳಿದ್ದು ಈಗಲಾದರೂ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲವಾದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅಸ್ಥಿತ್ವ ಕಳೆದುಕೊಳ್ಳಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಶೋಭಾ ಪಲ್ಲಾಗಟ್ಟೆ, ಮುದೇಗೌಡ್ರ ಗಿರೀಶ್, ಕೆ.ಜಿ ಶಿವಕುಮಾರ್,ಎ.ನಾಗರಾಜ್, ಅಶ್ವಿನಿ ಪ್ರಶಾಂತ್,ಪಾಲಿಕೆ ಸದಸ್ಯರು. ಜಿ.ಪಂ, ತಾ.ಪಂ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿದ್ದರು.

Be the first to comment on "ಎಸ್‌ಎಸ್ ಗೆ ಸಚಿವ ಸ್ಥಾನ ನೀಡಲು ಪಟ್ಟು- ಬೆಂಗಳೂರು ಚಲೋ"

Leave a comment

Your email address will not be published.


*