ಉಚಿತ ಬಸ್ ಪಾಸ್ ಗಾಗಿ ದಾವಣಗೆರೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Share
  • 31
    Shares

ದಾವಣಗೆರೆ – ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಎಐಡಿಎಸ್ಓ ಹಾಗೂ ಎಐಡಿವೈಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಯದೇವವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು. ಈ ವೇಳೆ ಎಐಡಿಎಸ್ಓ ಸಂಘಟನೆಯ ನಗರ ಸಮಿತಿ ಅಧ್ಯಕ್ಷೆ ಸೌಮ್ಯ ಮಾತನಾಡಿ, ಈಗಾಗಲೇ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿಗೆ ಎಲ್ಲಾ ವಿದ್ಯಾರ್ಥಿಗಳಿಗೆ ಪಾಸ್ ನೀಡುವ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ಸಾರಿಗೆ ಇಲಾಖೆ ಅಧಿಕಾರಿಗಳು ಪೂರ್ಣಪ್ರಮಾಣದ ಬಸ್ ಪಾಸ್ ಹಣ ಸಂಗ್ರಹಿಸುವ ಆದೇಶ ಹೊರಡಿಸಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ಗೊಂದಲ ಮೂಡಿಸಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಪೋಷಕರಿಗೆ ಮಕ್ಕಳ ವಿದ್ಯಾಭ್ಯಾಸದ ಹೆಸರಿನಲ್ಲಿ ಹಣ ವೆಚ್ಚ ಮಾಡುವುದು ಹೊರೆಯಾಗುತ್ತಿದೆ. ಜೊತೆಗೆ ಮಕ್ಕಳ ವಿದ್ಯಾಭ್ಯಾಸ ಶುಲ್ಕ ಭರಿಸಬೇಕಾಗಿದೆ ಇದರಿಂದ ಅವರಿಗೆ ಆರ್ಥಿಕ ಹೊರೆಯಾಗಿದೆ. ಇದು ಮಕ್ಕಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಉಚಿತ ಬಸ್ ಪಾಸ್ ನ್ನು ಸರ್ಕಾರ ಕೂಡಲೇ ವಿತರಿಸಬೇಕು ಎಂದು ಒತ್ತಾಯಿಸಿದರು. ಈ ಆದೇಶ ನೀಡುವವರೆಗೆ ಹಿಂದಿನ ವರ್ಷದ ಬಸ್ ಪಾಸ್ ಉಪಯೋಗಿಸುವಂತೆ ನಿರ್ದೇಶನ ನೀಡಬೇಕು. ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 12 ತಿಂಗಳ ಬಸ್ ಪಾಸ್ ವಿತರಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಮಧುತೊಗಲೇರಿ, ನಾಗಜ್ಯೋತಿ, ಸ್ಮಿತ, ತಿಪ್ಪೇಸ್ವಾಮಿ, ಶಶಿಕುಮಾರ್, ಗುರು, ಹರಿಪ್ರಸಾದ್, ಲಿಂಗರಾಜ್, ಸಂತೋಷ್, ಸಹನಾ ಮತ್ತಿತರರು ಭಾಗವಹಿಸಿದ್ದರು.

Be the first to comment on " ಉಚಿತ ಬಸ್ ಪಾಸ್ ಗಾಗಿ ದಾವಣಗೆರೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ"

Leave a comment

Your email address will not be published.


*