ಜೂ. 29ರಿಂದ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಸಕಲ ಸಿದ್ದತೆ

Share
  • 29
    Shares

ದಾವಣಗೆರೆ – ಜೂನ್ ೨೯ ರಿಂದ ಜುಲೈ ೧೦ ರವರೆಗೆ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಜಿಲ್ಲೆಯ ೧೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪದೋಷಗಳು ಆಗದಂತೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಕ್ರಮ ಕೈಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ತಿಳಿಸಿದರು.
ಪೂರಕ ಪರೀಕ್ಷೆಗಳ ಸಿದ್ದತೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಾವಣಗೆರೆಯಲ್ಲಿ ೪ ಕೇಂದ್ರಗಳು, ಹರಿಹರ ತಾಲ್ಲೂಕಿನಲ್ಲಿ ೦೧, ಜಗಳೂರು ತಾಲ್ಲೂಕು ೦೧, ಚನ್ನಗಿರಿ ತಾಲ್ಲೂಕು ೦೧, ಹೊನ್ನಾಳಿ ತಾಲ್ಲೂಕು ೦೧, ಹರಪನಹಳ್ಳಿ ತಾಲ್ಲೂಕು ೦೨ ಕೇಂದ್ರ ಸೇರಿದಂತೆ ಒಟ್ಟು ೧೦ ಕೇಂದ್ರಗಳಲ್ಲಿ ೪೫೦೩ ಬಾಲಕರು ಮತ್ತು ೩೬೩೭ ಬಾಲಕಿಯರು ಸೇರಿದಂತೆ ಒಟ್ಟು ೮೧೪೦ (ಕಲಾ ವಿಭಾಗದಲ್ಲಿ ೩೧೧೦, ವಾಣಿಜ್ಯ ವಿಭಾಗ ೨೨೭೦, ವಿಜ್ಞಾನ ವಿಭಾಗದಲ್ಲಿ ೨೭೬೦ ವಿದ್ಯಾರ್ಥಿಗಳು) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಬೆಳಿಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನದ ವೇಳೆ ೨.೩೦ ರಿಂದ ೫.೪೫ ರವರೆಗೆ ನಡೆಯಲಿವೆ.
ಮುಖ್ಯ ಅಧೀಕ್ಷಕರನ್ನು ಹೊರತು ಪಡಿಸಿ ವಿದ್ಯಾರ್ಥಿಗಳು ಮತ್ತಿತರೆ ಯಾವುದೇ ಅಧಿಕಾರಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಜಿಲ್ಲಾ ವ್ಯಾಪ್ತಿಯ ೧೦ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಮುಗಿಯುವವರೆಗೆ ಪ್ರತಿ ದಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವು.
ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತವಾದ ಬೆಂಚ್ ಮತ್ತು ಡೆಸ್ಕ್‌ಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಹಾಗೂ ಪ್ರಶ್ನೆಪತ್ರಿಕೆ ಠೇವಣಿ/ವಿತರಣೆ ಕಾರ್ಯದಲ್ಲಿ ತೊಡಗುವ ಅಧಿಕಾರಿಗಳ ಬಯೋಮೆಟ್ರಿಕ್ಸ್ ನೋಂದಣಿ, ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸುವಂತೆ ಸೂಚಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸಾವಿತ್ರಮ್ಮ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ತಾಲ್ಲೂಕಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಒಬ್ಬರು ಅಧಿಕಾರಿ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗುವುದು. ಬೆಂಗಳೂರಿನ ೨ ಪರೀಕ್ಷಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಪ್ರಶ್ನೆಪತ್ರಿಕೆ ಪಡೆಯಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಪ್ರಶ್ನೆಪತ್ರಿಕೆ ಪಡೆಯುವ ವ್ಯವಸ್ಥೆ ಮಾಡಿಕೊಳ್ಳಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಜಿಲ್ಲೆಯ ಮಾರ್ಗಾಧಿಕಾರಿ, ಪರೀಕ್ಷಾ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಅನುಸರಿಸಬೇಕಾದ ಸೂಚನೆಗಳ ಕುರಿತು ವಿವರಿಸಿದರು. ಪ್ರಶ್ನೆಪತ್ರಿಕೆ ತೆರೆಯುವಾಗ ಮತ್ತು ಪರೀಕ್ಷೆ ನಂತರ ಅನುಸರಿಸಬೇಕಾ ಪ್ರಕ್ರಿಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು/ನೌಕರರಿಗೆ ವಿವರಿಸಿದರು.
ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Be the first to comment on "ಜೂ. 29ರಿಂದ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಸಕಲ ಸಿದ್ದತೆ"

Leave a comment

Your email address will not be published.


*