ಕಾಡಾ ಸಮಿತಿ ಸಭೆ-ಜುಲೈ 12 ರಿಂದಲೇ 100 ದಿನ ನೀರು ಹರಿಸಲು ಆದೇಶ

Share
  • 383
    Shares

ದಾವಣಗೆರೆ: ದಾವಣಗೆರೆಯ ಜೀವನಾಡಿ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರ ಮನವಿಗೆ ಸ್ಪಂದಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಜುಲೈ ೧೨ರಿಂದಲೇ ಭದ್ರಾ ಎಡ ಮತ್ತು ಬಲ ದಂಡೆಗಳ ಕಾಲುವೆಗಳಿಗೆ ನೀರು ಹರಿಸುವಂತೆ ಆದೇಶಿಸಿದ್ದಾರೆ.ಇಂದು ಬೆಂಗಳೂರಿನಲ್ಲಿ ಭದ್ರಾ ಕಾಡಾ ಸಮಿತಿಯ ಸಭೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರ ಮನವಿಗೆ ಸ್ಪಂದಿಸಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಈ ಆದೇಶ ನೀಡಿದ್ದಾರೆ.ಕಳೆದ ವಾರ ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಿಂದ ರೈತ ಕಂಗಾಲಾಗಿರುವ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ನೇರವಾಗಿ ಮುಖ್ಯಮಂತ್ರಿಗಳಿಗೆ ಭದ್ರಾ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿದ್ದರು.ಅಂದು ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಇಂದು ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಸಹ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ರೈತರ ಸಂಕಷ್ಟವನ್ನು ಸಭಾ ಗಮನಕ್ಕೆ ತಂದರು.ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಡಾ|| ಶಾಮನೂರು ಶಿವಶಂಕರಪ್ಪನವರು ಕಳೆದ ಬಾರಿಗಿಂತ ಈ ಬಾರಿ ಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಬಂದಿದ್ದು, ಆದರೆ ಭದ್ರಾ ಕಾಲುವೆಯ ಭಾಗಗಳಲ್ಲಿ ಸಾಧಾರಣ ಮಳೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇದೀಗ ರೈತರಿಗೆ ಅನುಕೂಲ ಆಗುವ ದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದ್ದು, ಸಚಿವರು ತಕ್ಷಣ ಸ್ಪಂದಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ- ಶಿವಮೊಗ್ಗ ಜಿಲ್ಲೆಗಳ ಜನಪ್ರತಿನಿಧಿಗಳು, ರೈತ ಮುಖಂಡರು, ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

Be the first to comment on "ಕಾಡಾ ಸಮಿತಿ ಸಭೆ-ಜುಲೈ 12 ರಿಂದಲೇ 100 ದಿನ ನೀರು ಹರಿಸಲು ಆದೇಶ"

Leave a comment

Your email address will not be published.


*