ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Share
  • 17
    Shares

ದಾವಣಗೆರೆ-೨೦೧೮-೧೯ ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದ್ದು ಜುಲೈ ೨೦ ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು /ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ದಾವಣಗೆರೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ"

Leave a comment

Your email address will not be published.


*