ಪತ್ರಕರ್ತ.ಬಿ.ಚನ್ನವೀರಯ್ಯರಿಗೆ ಕರ್ನಾಟಕ ಜ್ಯೋತಿ ಪ್ರಶಸ್ತಿ

Share
  • 9
    Shares

ದಾವಣಗೆರೆ: ಭಾರತೀಯ ಕಲಾ ಸಾಂಸ್ಕೃತಿಕ ಅಕಾಡೆಮಿಯಿಂದ ಕೊಡಮಾಡುವ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಪ್ರಜಾಪ್ರಗತಿಯ ಬಿ.ಚನ್ನವೀರಯ್ಯ ಅವರು ಭಾಜನರಾಗಿದ್ದಾರೆ.
ಚನ್ನವೀರಯ್ಯನವರು ಪತ್ರಿಕಾ ರಂಗದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಅಕಾಡೆಮಿಯು ಇವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಇವರಿಗೆ ಜುಲೈ ೨೨ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುವ ಭಾರತದ ಪ್ರಜಾಪ್ರಭುತ್ವಕ್ಕಿರುವ ಸವಾಲುಗಳು ವಿಷಯದ ಕುರಿತು ನಡೆಯುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕಾಡೆಮಿಯ ಅಧ್ಯಕ್ಷ ಎನ್.ಮಲ್ಲೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ಪತ್ರಕರ್ತ.ಬಿ.ಚನ್ನವೀರಯ್ಯರಿಗೆ ಕರ್ನಾಟಕ ಜ್ಯೋತಿ ಪ್ರಶಸ್ತಿ"

Leave a comment

Your email address will not be published.


*