ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ

Share
  • 23
    Shares

ದಾವಣಗೆರೆ – ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಘಟಕಗಳ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು ಆ. ೫ ಕ್ಕೆ ಚುನಾವಣಾ ನಿಗದಿಪಡಿಸಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಪಿ.ಜೆ.ಚೈತನ್ಯ ಕುಮಾರ್ ಪ್ರಕಟಿಸಿದ್ದಾರೆ.
ರಾಜ್ಯ ಚುನಾವಣಾಧಿಕಾರಿಗಳ ಆದೇಶದಂತೆ ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಪಾಲಿಕೆಯ ಮಾಜಿ ಕಂದಾಯ ಅಧಿಕಾರಿ ಜಿ.ಕೆ.ಪಂಚಣ್ಣ ಅವರನ್ನು ನೇಮಿಸಲಾಗಿದೆ. ದಾವಣಗೆರೆ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆಯ ಕೊಠಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಿದ್ದು ಕಚೇರಿಯ ನಾಮಫಲಕದಲ್ಲಿ ಅರ್ಹ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಆ ಸಮಯದಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಜು. 19 ರ ಮಧ್ಯಾಹ್ನ 3ಗಂಟೆಯವರೆಗೆ ಅವಕಾಶವಿದೆ. ಜು. 22 ರಂದು ಮಧ್ಯಾಹ್ನ ೧ ಗಂಟೆಯ ನಂತರ ನಾಮಪತ್ರ ಪರಿಶೀಲನಾ ಕಾರ್ಯ ನಡೆಸಲಾಗುವುದು ಮತ್ತು ಅಂದೇ ಕ್ರಮಬದ್ದವಾಗಿರುವ ನಾಮಪತ್ರಗಳ ಪಟ್ಟಿ ಪ್ರಕಟಿಸಲಾಗುವುದು. ನಾಮಪತ್ರಗಳನ್ನು ಹಿಂಪಡೆಯಲು ಜು. ೨೪ ರ ಮಧ್ಯಾಹ್ನ ೧೨ ಗಂಟೆಯವರೆಗೆ ಅವಕಾಶವಿದೆ. ನಂತರ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಗತ್ಯಬಿದ್ದಲ್ಲಿ ಆಗಸ್ಟ್ 5 ರಂದು ಚುನಾವಣಾ ನಡೆಸಲಾಗುವುದು. ಅಂದು ಬೆಳಗ್ಗೆ10-30 ರಿಂದ ಮಧ್ಯಾಹ್ನ 3-30ರವರೆಗೆ ಮತದಾನ ನಡೆಯಲಿದೆ. ರಾಜ್ಯ ಘಟಕದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಮತದಾನ ನಡೆದ ಸ್ಥಳದಲ್ಲಿಯೇ ಮತಏಣಿಕೆ ನಡೆಯಬೇಕು. ರಾಜ್ಯ ಸಂಘದ ಪದಾಧಿಕಾರಿಗಳ ಮತ್ತು ಮತಏಣಿಕೆಯ ನಂತರದ ವಿವರವನ್ನು ರಾಜ್ಯ ಚುನಾವಣಾಧಿಕಾರಿಗಳಿಗೆ ಇಮೇಲ್ ಮೂಲಕ ತಿಳಿಸಲು ವಿನಂತಿಸಿದ್ದಾರೆ.

Be the first to comment on "ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ"

Leave a comment

Your email address will not be published.


*