ಪರಿಶಿಷ್ಟ ಜಾತಿ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ

Share
  • 7
    Shares

ದಾವಣಗೆರೆ -ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.೩೫ ಸಾವಿರಗಳ ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದ್ದಾರೆ.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ೪ ಸೈಜ್ ಹಾಳೆಯಲ್ಲಿ ಡಿ.ಟಿ.ಪಿ ಮಾಡಿದ ಕನಿಷ್ಟ ೨೦೦ ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.
೧೮ ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ದಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಜುಲೈ.೭ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್:www.kannadapustakapradhikara@gmail.com  ದೂರವಾಣಿ ಸಂಖ್ಯೆ-೦೮೦-೨೨೪೮೪೫೧೬/೨೨೦೧೭೭೦೪ ಎಂದು ಆಳಿತಾಧಿಕಾರಿ(ಪ್ರ) ಸೌಭಾಗ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ಪರಿಶಿಷ್ಟ ಜಾತಿ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನ"

Leave a comment

Your email address will not be published.


*