ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಚಾಂಪಿಯನ್‌ಶಿಪ್

Share
  • 59
    Shares

ದಾವಣಗೆರೆ-2018-19ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಚಾಂಪಿಯನ್ ಪಟ್ಟವನ್ನು ತನ್ನ ಮುಡಿಗೇರಿಸಿದೆ. ದಾವಣಗೆರೆ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ 2018-19ನೇ ಸಾಲಿನ ಜಿಲ್ಲಾ ಮಟ್ಟದ ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದ ಸ್ಪರ್ಧೆಗಳಲ್ಲಿ ಥsಬಾಲ್ ಹಾಗೂ ನೆಟ್‌ಬಾಲ್‌ನಲ್ಲಿ ಪ್ರಥಮ ಸ್ಥಾನ 4 X100 ಮೀಟರ್ ರಿಲೇನಲ್ಲಿ ಪ್ರಥಮ, ೫೦೦೦ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ, ಈಜು ವಿಭಾಗದ ೫೦ಮೀ ಬ್ಯಾಕ್‌ಸ್ಟ್ರೋಕ್ ಹಾಗೂ ೩೦೦ಮೀ ಮಿಡ್ಲೆನಲ್ಲಿ ಪ್ರಥಮ, ಸೈಕ್ಲಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕಿಯರ ವಿಭಾಗದ ಥ್ರೋಬಾಲ್ ಹಾಗೂ ನೆಟ್‌ಬಾಲ್‌ನಲ್ಲಿ ಪ್ರಥಮ ಸ್ಥಾನವನ್ನು , ಸೈಕ್ಲಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಸಿದ್ದಗಂಗಾ ಕಾಲೇಜು ಹಾಗೂ ದಾವಣಗೆರೆ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇಷ್ಟೇ ಅಲ್ಲದೆ ಬಾಲಕರ ವಿಭಾಗದ ಪುಟ್‌ಬಾಲ್‌ನಲ್ಲಿ ದ್ವಿತೀಯ ಸ್ಥಾನ, ಚೆಸ್‌ನಲ್ಲಿ ದ್ವಿತೀಯ ಸ್ಥಾನ, ಹ್ಯಾಂಡ್ ಬಾಲ್ ಹಾಗೂ ಜುಡೋನಲ್ಲಿ ದ್ವಿತೀಯ ಸ್ಥಾನ, ಈಜು ವಿಭಾಗದಲ್ಲಿ ೫೦ಮೀಟರ್ ಬ್ಯಾಕ್ ಸ್ಟ್ರೋಕ್‌ನಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನ ಹಾಗೂ ೫೦ಮೀಟರ್ ಫ್ರೀ ಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಸೈಕ್ಲಿಂಗ್ ವಿಭಾಗದಲ್ಲಿ ಪ್ರಥಮ, ದ್ವಿತೀಯ ತೃತೀಯ ಹಾಗೂ ಸಮಧಾನಕರ ಹೀಗೆ ಸೈಕ್ಲಿಂಗ್‌ನ ಎಲ್ಲಾ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಅಥ್ಲೆಟಿಕ್ ವಿಭಾಗದಲ್ಲಿ ಲಾಂಗ್‌ಜಂಪ್‌ನಲ್ಲಿ ತೃತೀಯ, ಟ್ರಿಪಲ್ ಜಂಪ್‌ನಲ್ಲಿ ತೃತೀಯ, ೪೦೦ಮೀ. ಹರ್ಡಲ್ಸ್‌ನಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಬಾಲಕಿಯರ ವಿಭಾಗದ ಬಾಸ್ಕೆಟ್‌ಬಾಲ್‌ನಲ್ಲಿ ದ್ವಿತೀಯ, ಚೆಸ್‌ನಲ್ಲಿ ದ್ವಿತೀಯ, ಶಾಟ್‌ಪುಟ್ ಹಾಗೂ ಡಿಸ್‌ಕಸ್ ಥ್ರೋನಲ್ಲಿ ದ್ವಿತೀಯ ಸ್ಥಾನ, ಸೈಕ್ಲಿಂಗ್‌ನಲ್ಲಿ ಒಂದು ದ್ವಿತೀಯ ಹಾಗೂ ಮೂರು ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ. ಭಾಗವಹಿಸಿದ ಎಲ್ಲಾ ಆಟಗಳಲ್ಲಿ ಪ್ರಶಸ್ತಿಗಳಿಸಿ ಕಾಲೇಜಿನ ಕ್ರೀಡಾ ಸ್ಪೂರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಪ್ರಸಾದ್ ಬಂಗೇರ.ಎಸ್ ಮನಸ್ಪೂರ್ತಿಯಾಗಿ ಕೊಂಡಾಡಿದರಲ್ಲದೆ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಯನ್ನು ಮೆರೆಯಲೆಂದು ಹಾರೈಸಿದರು.
ವಿದ್ಯಾರ್ಥಿಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಸಂಸ್ಧೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಎಂ.ಎಸ್.ಶಿವಣ್ಣ, ಮುಖ್ಯೋಪಾ ಧ್ಯಾಯಿನಿ ಶ್ರೀಮತಿ ಜಸ್ಟಿನ್ ಡಿಸೋಜ, ಸಂಸ್ಥೆಯ ಅಧ್ಯಕ್ಷ ಹೇಮಂತ್.ಡಿ.ಎಸ್. ಹಾಗೂ ಕಾಲೇಜಿನ ನಿರ್ದೇಶಕರಾದ ಡಾ|| ಜಯಂತ್.ಡಿ.ಎಸ್ ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿ ದರು. ಕಾಲೇಜಿನ ಕ್ರೀಡಾ ಸಮಿತಿಯ ಮುಖ್ಯಸ್ಥರು ಹಾಗೂ ಸದಸ್ಯರ ಕಾರ್ಯ ವೈಖರಿಯನ್ನು ಇದೇ ಸಂದರ್ಭದಲ್ಲಿ ಪ್ರಶಂಸಿಸಲಾಯಿತು.

Be the first to comment on "ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಚಾಂಪಿಯನ್‌ಶಿಪ್"

Leave a comment

Your email address will not be published.


*