ಕ್ರೀಡಾ ಚಟುವಟಿಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೃದ್ಧಿ-ಡಾ.ಬಗಾದಿ ಗೌತಮ್

Share
  • 27
    Shares

ದಾವಣಗೆರೆ -ಕ್ರೀಡಾಕೂಟಗಳನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ, ಪ್ರತಿನಿತ್ಯ ಎಲ್ಲರೂ ಕ್ರೀಡೆ ಅಥವಾ ಯೋಗದಂತಹ ದೈಹಿಕ ಚಟುವಟಿಕೆಗಾಗಿ ಸ್ವಲ್ಪ ಸಮಯ ಮೀಸಿಲಿಟ್ಟಲ್ಲಿ ಉತ್ತಮ ಆರೋಗ್ಯದೊಂದಿಗೆ ಸಕ್ರಿಯ ಕರ್ತವ್ಯ ನಿರ್ವಹಣೆಗೆ ಸಹಕಾರಿಯಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ೨೦೧೮-೧೯ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಕ್ರೀಡಾಕೂಟ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಸರ್ಕಾರಿ ನೌಕರರು ಸೇರಿದಂತೆ ಎಲ್ಲರೂ ಪ್ರತಿದಿನ ನಡಿಗೆ, ಓಟ, ಯೋಗ ಸೇರಿದಂತೆ ಯಾವುದೇ ಶಿಸ್ತುಬದ್ದ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಮಗೆ ಟೈಂ ಇಲ್ಲ ಎಂದು ಹೇಳದೇ, ಟೈಂ ನಿರ್ವಹಣೆ ಮಾಡಿಕೊಂಡು ಪ್ರತಿದಿನ ಅರ್ಧ ಅಥವಾ ಒಂದು ಗಂಟೆ ಇಂತಹ ದೈಹಿಕ ಚಟುವಟಿಕೆಗೆ ಮೀಸಲಿಡಬೇಕು. ಇದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಯಾಗುತ್ತದೆ. ಕಾರ್ಯಕ್ಷಮತೆಯೂ ಹೆಚ್ಚುತ್ತದೆ ಎಂದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಾಮಾನ್ಯ ಮನುಷ್ಯ ಸ್ವೀಕರಿಸುವ ಸವಾಲಿಗೂ, ಒಬ್ಬ ಕ್ರೀಡಾಪಟು ಸ್ವೀಕರಿಸುವ ಸವಾಲಿಗೂ ವ್ಯತ್ಯಾಸವಿದೆ. ಸ್ವೀಕರಿಸಿದ ಸವಾಲಿಗೆ ಬದ್ದರಾಗಿ ಕ್ರೀಡಾಪಟು ತನ್ನನ್ನು ತಾನು ತೊಡಗಿಸಿಕೊಳ್ಳಬೇಕಿರುತ್ತದೆ. ಸೋಲು ಅಥವಾ ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೊಂದಬೇಕಾಗುತ್ತದೆ ಎಂದರು.
ಕ.ರಾ.ಸ.ನೌ.ಸಂಘದ ಅಧ್ಯಕ್ಷ ಎಸ್.ಹಾಲೇಶಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ನೌಕರರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ಇಂತಹ ಪ್ರತಿಭೆಯನ್ನು ಹೊರಹಾಕಲು ಇದೊಂದು ಉತ್ತಮ ಅವಕಾಶವಾಗಿದೆ. ನೌಕರರು ನಿತ್ಯ ಕಡತ, ಕಚೇರಿ, ಕರ್ತವ್ಯದಲ್ಲಿ ಮುಳುಗಿದ್ದು, ಈ ಎರಡು ದಿನಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆ ಹಾಗೂ ಶಕ್ತಿ ಸಾಮರ್ಥ್ಯಾನುಸಾರ ವಿವಿಧ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಚೈತನ್ಯಶೀಲರಾಗಲು ಇದೊಂದು ಸದಾವಕಾಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಕರಾರಸಾ ನೌಕರರ ಸಂಘದ ಅಧ್ಯಕ್ಷರು ಗುಂಡು ಎಸೆಯುವ ಮೂಲಕ ಕ್ರೀಡೆಗೆ ಚಾಲನೆ ನೀಡಿದರು. ಕರಾಸನೌ ಸಂಘದ ಗೌರವಾಧ್ಯಕ್ಷ ಕೃಷ್ಣಮೂರ್ತಿ, ಕ್ರೀಡಾ ಕಾರ್ಯದರ್ಶಿಗಳಾದ ವಿ.ಧನಂಜಯ, ಸಿ.ಕೃಷ್ಣಪ್ಪ, ಸಾಂಸ್ಕೃತಿಕ ಕಾರ್ಯ ದರ್ಶಿಗಳಾದ ವಿ.ಶಾಂತಲಾ, ಸಿ.ಜಿ.ಜಗದೀಶ್ ಕೂಲಂಬಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್, ಇತರೆ ಪದಾಧಿಕಾರಿಗಳು, ಸರ್ಕಾರಿ ನೌಕರರು ಹಾಜರಿದ್ದರು.
ಸಿದ್ದಗಂಗಾ ಶಾಲಾ ಮಕ್ಕಳು ನಾಡಗೀತೆ ಹಾಡಿದರು. ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸೋಮಶೇಖರ್ ನಿರೂಪಿಸಿದರು. ಕರಾಸನೌ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಪರಶುರಾಮಪ್ಪ ಸ್ವಾಗತಿಸಿದರು. ಸಂಘದ ಖಜಾಂಚಿ ಬಿ. ಮಂಜುನಾಥ್ ವಂದಿಸಿದರು.

Be the first to comment on "ಕ್ರೀಡಾ ಚಟುವಟಿಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೃದ್ಧಿ-ಡಾ.ಬಗಾದಿ ಗೌತಮ್"

Leave a comment

Your email address will not be published.


*